ಇಂದಿನ ರಾಜಕೀಯ ಸನ್ನಿವೇಶ ನೋಡಿದಾಗ ಮನಸ್ಸಿನ ಭಾವನೆಗಳನ್ನು ಹೊರಹಾಕಲೇ ಬೇಕೆನಿಸಿತು.
ಮೊನ್ನೆ ರಾಜ್ಯದಲ್ಲಿ ಬಿಜೆಪಿ ಸರಕಾರದಲ್ಲಿ ರಾಜಕೀಯದ ಬಿಸಿ ಬಿಸಿ ಚರ್ಚೆಗಳು ನಡೆಯುತ್ತಿತು. ಕರ್ನಾಟಕದ ಬಿಜೆಪಿಗೆ ಇದು ಹೊಸದಲ್ಲ ಬಿಡಿ.ಇಲ್ಲಿ ಶಿಸ್ತಿನ ಪಕ್ಷಕ್ಕೆ ಇದೆಲ್ಲಾ ಮಾಮೂಲು ಅಂತಾಗಿದೆ. ಹಾಗಿದ್ದರೂ ಈ ಬಾರಿ ಮಾತ್ರಾ ಗಂಭೀರ ವಿಚಾರ ಇದು. ಲೋಕಾಯುಕ್ತರು ಸಲ್ಲಿಸಿದ್ದ ಗಣಿ ವರದಿಯಲ್ಲಿ ಮುಖ್ಯಮಂತ್ರಿಗಳ ಹೆಸರೂ ಇದೆ. ಹಾಗಾಗಿ ಈಗಂತೂ ನೈತಿಕತೆಯ ಪ್ರಶ್ನೆ. ಇದುವರೆಗೆ ಕರ್ನಾಟಕದ ಬಿಜೆಪಿಯಲ್ಲಿ ಇದು ಇದ್ದಂತೆ ಕಂಡುಬಂದಿರಲಿಲ್ಲ. ಆದರೆ ಈಗ ಇಡೀ ದೇಶದ ಜನ ನೋಡುತ್ತಿದ್ದಾರೆ ಈ ವರದಿಯನ್ನು ಅದರ ಜೊತೆಗೆ ಭ್ರಷ್ಠಾಚಾರದ ಬಗ್ಗೆ ಸಾಮಾನ್ಯ ಮನುಷ್ಯನೂ ಮಾತನಾಡುತ್ತಿದ್ದಾನೆ ಹಾಗಾಗಿ ಸರಕಾರಕ್ಕೆ ಅದಕ್ಕಿಂತಲೂ ಹೆಚ್ಚು ದೇಶದ ಬಿಜೆಪಿಗೆ ಇದೊಂದು ಮುಖ್ಯ ವಿಷಯ. ಹಾಗಾಗಿ ಇದು ತೀವ್ರ ಸ್ವರೂಪ ಪಡೆದುಕೊಂಡಿತು ಎನ್ನಿ.
ವಿಷಯ ಅದಲ್ಲ.
ಕರ್ನಾಟಕದಲ್ಲಿ ಮಾತ್ರವಲ್ಲ ಇಡೀ ದಕ್ಷಿಣ ಭಾರತದ ಮೊದಲ ಬಿಜೆಪಿ ಸರಕಾರ ಎಂಬ ಖ್ಯಾತಿಗೂ ಬಂದಿತು. ಆಗ ಎಷ್ಟು ಜನ ಸಂತಸ ಪಟ್ಟವರು. ಮೊನ್ನೆ ನನಗೊಬ್ಬರು ಹಿರಿಯರು ಹೇಳಿದರು , ಅಂದು 1978 - 80 ರ ಸುಮಾರಿಗೆ ಒಂದೇ ಒಂದು ಸೀಟು ಇದ್ದಿರಲಿಲ್ಲ ಬಿಜೆಪಿಗೆ , ಜನಸಂಘಕ್ಕೆ , ಆಗ ನಾವು ನಮ್ಮ ತೋಟ ಮಾರಿ ಪಾರ್ಟಿಗಾಗಿ ಕೆಲಸ ಮಾಡಿದ್ದೆವು. ಅದು ಮಾತ್ರವಲ್ಲ ಎಷ್ಟು ಜನ ಇದರಲ್ಲಿ ಹೋರಾಡಿದ್ದರು , ಆಗ ಅಧಿಕಾರ ಎಂಬುದು ನಮಗೆ ಕನಸಾಗಿತ್ತು ಎಂದು ಅವರು ವಿವರಿಸುತ್ತಿದ್ದರು , ಅದೆಷ್ಟೂ ಜನ ನ್ಯಾಯಕ್ಕಾಗಿ ಹೋರಾಡಿದ್ದಾರೆ ಇದೇ ಇಂದಿನ ಬಿಜೆಪಿಯಲ್ಲಿ, ಆದರೆ ಅದು ಅಧಿಕಾರಕ್ಕೆ ಅಲ್ಲ , ಊರ ಜನರಿಗಾಗಿ. ಹೀಗಿದ್ದ ಪಕ್ಷ ಇವತ್ತು ನೋಡಿದರೆ ಅಧಿಕಾರಕ್ಕಾಗಿಯೇ ಉಳಿದುಕೊಂಡಂತಿದೆ ಎನ್ನುತ್ತಾರೆ ಅವರು.ಆಗ ಇದೇ ಪಾರ್ಟಿಯಲ್ಲಿ ಜಾತಿ ಎಂಬುದು ಇದ್ದೇ ಇರಲಿಲ್ಲ.ಎಲ್ಲರೂ ಸಮಾನರು. ಒಬ್ಬ ನಾಯಕ.ಅವನ ಮಾತೇ ಅಂತಿಮ. ಆದರೆ ಎಲ್ಲರೂ ಜೊತೆಯಾಗಿ ಕೂತು ಚರ್ಚಿಸಿ ಮುಂದಿನ ನಡೆ ಇತ್ತು. ಆ ಬಳಿಕ ಎಲ್ಲವೂ ನಾಯಕ ಹೇಳಿದಂತೆ.ನಾಯಕನೇ ಮುಂದೆ.ಸುಳಿದವರು ಆತನ ಹಿಂದೆ. ಆದರೆ ಇವತ್ತು ನೋಡಿ ಎಲ್ಲರೂ ನಾಯಕರೇ , ಜಾತಿ ಜಾತಿ ಅಂತ ಪಕ್ಷದೊಳಗ ಜಾತಿ ನಾಯಕರು ಆಗಿ ಬಿಟ್ಟಿದ್ದಾರೆ.
ಇದೆಲ್ಲಾ ನೋಡುವಾಗ ನನಗನ್ನಿಸುತ್ತದೆ ನಾವು ಇದಕ್ಕೆನಾ ಕೆಲಸ ಮಾಡಿದ್ದು ಅಂತ ಅವರು ನೊಂದುಕೊಂಡು ಹೇಳುತಿದ್ದರು.
ಅವರು ಹೇಳಿದ್ದು ನಿಜ ಅನ್ನಿ.
ಹಿಂದೆಲ್ಲಾ ಬಿಜೆಪಿಯಲ್ಲಿ ಓಟಿಗೆ ನೋಟು ಕೊಡುತ್ತಿರಲಿಲ್ಲ. ಕಾರ್ಯಕರ್ತರೆಲ್ಲರೂ ಅವರೇ ಕೈಯಿಂದ ದುಡ್ಡು ಹಾಕಿ ಚುನಾವಣೆಗೆ ಶ್ರಮಿಸುತ್ತಿದ್ದರು. ಆದರೆ ಇಂದು ಅದೇ ಬಿಜೆಪಿಯಲ್ಲಿ ದುಡ್ಡು ಕೊಡದೆ ಚುನಾವಣೆಯಲ್ಲಿ ಯಾವೊಬ್ಬ ಕಾರ್ಯಕರ್ತನೂ ಇಳಿಯುವುದಿಲ್ಲ. ಅದು ಬಿಡಿ ಅಂದು ಒಂದು ವಾರ್ಡ್‌ನಲ್ಲಿ ಇಷ್ಟೇ ಓಟು ಬಿಜೆಪಿಗೆ ಅಂತ ಲೆಕ್ಕ ಮಾಡಿ ಹೇಳುತ್ತಿದ್ದರು ಕಾರ್ಯಕರ್ತರು , ಆದರೆ ಇಂದು ಈ ಲೆಕ್ಕ ಎಲ್ಲಾ ತಲೆಕೆಳಗಾಗಿದೆ. ಹಾಗೆ ಲೆಕ್ಕ ಮಾಡುವವರೂ ಇಲ್ಲ , ಕೇಳುವವರೂ ಇಲ್ಲ.
ಇನ್ನೊಂದು ಈಗಿನ ರಾಜಕೀಯದಲ್ಲಿ ನನಗೆ ಅನ್ನಿಸಿದ್ದು , ಬಿಜೆಪಿ ಹೈಕಮಾಂಡ್ ದುರ್ಬಲವೆ ಅಂತ?. ಯಾಕೆಂದರೆ ಇಷ್ಟಲ್ಲಾ ರಾಜಕೀಯ ಪ್ರಹಸನಗಳು ನಡೆಯುತ್ತಿದ್ದರೂ ಹೈಕಮಾಂಡ್ ಯಾಕೆ ಸುಮ್ಮನೆ ಇತು. ನೋಡಿ ಆಂಧ್ರಪ್ರದೇಶದಲ್ಲಿ ಜಗನ್‌ಮೋಹನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಏನು ಮಾಡಿತು? , ಇತ್ತ ನೋಡಿ ಕೇರಳದಲ್ಲಿ ಅಚ್ಯುತಾನಂದನ್ ಹಾಗೂ ಪಿಣರಾಯಿ ನಡುವಿನ ಜಗಳದಲ್ಲಿ ಏನು ಮಾಡಿತು ಅವರ ಹೈಕಮಾಂಡ್ ? ಅವುಗಳೆಲ್ಲಾ ಅಷ್ಟು ಬಲಾಡ್ಯವಾಗಿದ್ದರೆ ಬಿಜೆಪಿ ಹೈಕಮಾಂಡ್ ಯಾಕೆ ದುರ್ಬಲವಾಗಿದೆ ಅನ್ನೋದೇ ವಿಶೇಷ. . !
ಏನೇ ಇರಲಿ. ಶಿಸ್ತಿನ ಪಕ್ಷ , ಸಂಘಪರಿವಾರದ ಮಾರ್ಗದರ್ಶನದಲ್ಲಿ ಬೆಳೆಯುವ ಪಕ್ಷದಲಿ ಹೀಗೆ ಆಗಬಾರದಿತ್ತು.ಈಗ ಆದದ್ದಕ್ಕೆ ಮುಂದೆ ಪ್ರಾಯಶ್ಚಿತ್ತ ಇದ್ದೇ ಇದೆ ಬಿಡಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ